Dr. ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರು ರಾಜ್ಯಸಭೆಗೆ: ಹೆಗ್ಗಡೆ ಬಗ್ಗೆ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದೇನು?
Wednesday, July 6, 2022
ನವದೆಹಲಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಸಹಿತ ನಾಲ್ವರನ್ನು ಇಂದು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಬಗ್ಗೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರೇ ಟ್ವೀಟ್ ಮಾಡಿದ್ದಾರೆ.
'ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು.' ಎಂದು ಪ್ರಧಾನಿ ನರೇಂದ್ರ ಮೋದಿ ವೀರೇಂದ್ರ ಹೆಗ್ಗಡೆ ಬಗ್ಗೆ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಇನ್ನುಳಿದಂತೆ ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ, ಮಾಜಿ ಒಲಿಂಪಿಕ್ ಅಥ್ಲೀಟ್ ಪಿ.ಟಿ.ಉಷಾ ಮತ್ತು ವಿ. ವಿಜಯೇಂದ್ರ ಪ್ರಸಾದ್ ಗರು ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.