ಬೆಳ್ಳಾರೆ ಬಿಜೆಪಿ ಕಾರ್ಯಕರ್ತನ ಕೊಲೆ- ಇಂದು ( JULY 27) ಪುತ್ತೂರು, ಸುಳ್ಯ, ಕಡಬ ಬಂದ್ ಗೆ ಕರೆ
Wednesday, July 27, 2022
ಮಂಗಳೂರು: ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಇಂದು( ಜುಲೈ 27) ಪುತ್ತೂರು, ಸುಳ್ಯ, ಕಡಬ ಬಂದ್‌ಗೆ ಕರೆ ನೀಡಲಾಗಿದೆ.
ಪ್ರವೀಣ್ ಹತ್ಯೆಯನ್ನು ಖಂಡಿಸಿ ಬುಧವಾರ ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಸಂಘಟನೆಗಳು ಕರೆ ನೀಡಿವೆ ಎಂದು ತಿಳಿದುಬಂದಿದೆ.ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ, ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್ (30) ಅವರನ್ನು ದುಷ್ಕರ್ಮಿಗಳು ನಿನ್ನೆ ( ಜು.26) ರಾತ್ರಿ ತಲವಾರಿನಿಂದ ಕಡಿದು ಕೊಲೆ ಮಾಡಿದ್ದರು.
ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿಯಾಗಿರುವ ಪ್ರವೀಣ್ ಅವರು ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ತನ್ನ ಚಿಕನ್ ಸೆಂಟರ್ ಅನ್ನು ಮುಚ್ಚುತ್ತಿದ್ದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು.