ಪ್ರಧಾನಿ ಕಚೇರಿ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ ಈತ ಇಟ್ಟ ಬೇಡಿಕೆ ಏನು ಗೊತ್ತಾ?
Monday, July 4, 2022
ಚಾಮರಾಜನಗರ: ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ, ತನಗೆ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ, ದೇವರ ದರ್ಶನ, ದೊಡ್ಡಸಂಪಿಗೆ ಮರದ ವೀಕ್ಷಣೆಗೆ ವ್ಯವಸ್ಥೆ, ಜಂಗಲ್ ಸಫಾರಿಗೆ ವ್ಯವಸ್ಥೆ ಮಾಡುವಂತೆ ಬೇಡಿಕೆ ಇಟ್ಟಿದ್ದ ನಕಲಿ ಅಧಿಕಾರಿ ವಿರುದ್ಧ FIR ದಾಖಲಾಗಿದೆ.
ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ವಾಸ್ತವ್ಯ, ಜಂಗಲ್ ಸಫಾರಿ, ದೇವರ ದರ್ಶನ ದೊಡ್ಡಸಂಪಿಗೆ ಮರದ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ರಾವ್ ಎಂಬ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದರು ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದರು.
ಈ ವೇಳೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ವ್ಯಕ್ತಿಯ ಹುದ್ದೆ ಕೇಳಿದ್ದಾರೆ. ಆಗ ಕರೆ ಮಾಡಿದ ವ್ಯಕ್ತಿ, ಹೆಸರು ಹಾಗೂ ಹುದ್ದೆ ಬಹಿರಂಗಪಡಿಸಬಾರದೆಂದು ತಿಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಜಿಲ್ಲಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಧಾನಮಂತ್ರಿ ಕಚೇರಿ ಹೆಸರಲ್ಲಿ ವಂಚಿಸಲು ಯತ್ನಿಸಿರುವ ಅಪರಿಚಿತ ವ್ಯಕ್ತಿ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಅಪರಿಚಿತ ವ್ಯಕ್ತಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.