UDUPI : ಅತ್ಯಾಚಾರ ಎಸಗಿದ ಆರೋಪಿಗೆ 10 ವರ್ಷ ಜೈಲು
Saturday, July 9, 2022
ಮದುವೆಯಾಗುದಾಗಿ ನಂಬಿಸಿ, ಅತ್ಯಾಚಾರ ಎಸಗಿ, ಮಗುವಾದ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಣೇಶ್ ಶೆಟ್ಟಿ (35) ಅಪರಾಧಿಯೆಂದು ಸಾಬೀತಾಗಿದ್ದು, ಉಡಪಿಯ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿನ ಶಿಕ್ಷೆ ವಿಧಿಸಿದೆ. ಅಪರಾಧಿ ಕೆರಾಡಿಯ ನಿವಾಸಿ ಗಣೇಶ್ ಶೆಟ್ಟಿಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ 10 ವರ್ಷಗಳ ಕಠಿನ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ, ಮೋಸ ಮಾಡಿ ವಂಚಿಸಿದ್ದಕ್ಕೆ 1 ವರ್ಷ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ಪ್ರಕರಣದ ವಿಚಾರಣೆ ನಡೆಸಿದ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಅವರು, ತೀರ್ಪು ನೀಡಿದ್ದಾರೆ.
2013ರಲ್ಲಿ ಆರೋಪಿ ಗಣೇಶ್ ಶೆಟ್ಟಿಯು ಕಾಲೇಜು ವಿದ್ಯಾರ್ಥಿನಿ ಯೊಬ್ಬಳನ್ನು ಪ್ರೀತಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಗರ್ಭವತಿಯನ್ನಾಗಿಸಿದ್ದ. ಆದರೆ ಬಳಿಕ ಆತ ಮದುವೆಯಾಗಲು ನಿರಾಕರಿಸಿದ್ದು, ಸಂಪರ್ಕಕ್ಕೆ ಸಿಗದೇ ವಂಚಿಸಿದ್ದ. ಯುವತಿಯು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಪ್ರಕರಣ ದಾಖಲಾಗಿತ್ತು.