ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ : ಪಾರಾದ ಮೀನುಗಾರರು, 15 ಲಕ್ಷ ನಷ್ಟ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ‌ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ‌ ನಡೆದಿದೆ. 
ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದಿ. ಈ ವೇಳೆ ದೋಣಿ ಮಗುಚಿ ಬಿದಿದ್ದು, ಮೀನುಗಾರರು ಬೇರೆ ದೋಣಿಯವರ ಸಹಾಯದಿಂದ ಮಲ್ಪೆ ಬಂದರು ತಲುಪಿದ್ದಾರೆ.  ದೋಣಿಗೆ ಹಾನಿಯಾಗಿ 15 ಲಕ್ಷ ರುಪಾಯಿ ನಷ್ಟವಾಗಿದೆ.

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW