UDUPI: 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಉಡುಪಿಯ ಸಿನಿ ಶೆಟ್ಟಿ
Monday, July 4, 2022
ಉಡುಪಿ ಮೂಲದ ಸಿನಿ ಶೆಟ್ಟಿ 2022ರ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡು ಕರಾವಳಿಗೆ ಹೆಮ್ಮೆ ತಂದಿದ್ದಾಳೆ. 21ರ ಹರೆಯದ ಸಿನಿ ಶೆಟ್ಟಿ ಉಡುಪಿ ಜಿಲ್ಲೆಯ ಕಾಪುವಿನ ಇನ್ನಂಜೆ ಮೂಲದವರು. ಸ್ಪರ್ಧೆಯಲ್ಲಿ ಸಿನಿ ಕರ್ನಾಟಕ ಪ್ರತಿನಿಧಿಸಿದ್ದರು. ಜುಲೈ 04 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಫಿನಾಲೆಯಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಕೊಂಡಿದ್ದು, ಸಿನಿ ಶೆಟ್ಟಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಕೂಡಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ಅವರು ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್ ಕೋರ್ಸ್ ವ್ಯಾಸಾಂಗ ಮಾಡುತಿದ್ದಾರೆ 71ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ರಾಜಸ್ಥಾನದ ರೂಬಲ್ ಶೇಕಾವತ್ ಮತ್ತು ಉತ್ತರ ಪ್ರದೇಶದ ಶಿಂತಾನಾ ಚೌಹಾಣ್ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು.