
UDUPI : 9 ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯ ಗಡಿಪಾರಿಗೆ ಆದೇಶ
Wednesday, July 27, 2022
ಉಡುಪೊಯ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಗುಲ್ವಾಡಿ ಕಾಂಡ್ಲಗದ್ದೆ ನಿವಾಸಿ ಅಬೂಬಕ್ಕರ್ (43) ಎಂಬಾತನಿಗೆ 6 ತಿಂಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ, ಜಮಖಂಡಿ ಉಪವಿಭಾಗಕ್ಕೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಈತ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ತನ್ನ ಸಹಚರರೊಂದಿಗೆ ತಮ್ಮದೇ ಆದ ಒಂದು ತಂಡ ಕಟ್ಟಿಕೊಂಡು, ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ದ 9 ಪ್ರಕರಣ ದಾಖಲಾಗಿವೆ.
ಈತ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರ ಬಂದ ನಂತರ ಕೂಡ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಕಾರ್ಯದಲ್ಲಿ ಭಾಗಿಯಾಗುತಿದ್ದಾನೆ. ಈ ವರದಿ ಪರಿಶೀಲಿಸಿದ ಕುಂದಾಪುರ ಉಪವಿಭಾಗದ ದಂಡಾಧಿಕಾರಿ, ಜು.26ರಂದು ಅಬೂಬಕ್ಕರ್‌ಗೆ 6 ತಿಂಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ, ಜಮಖಂಡಿ ಉಪವಿಭಾಗಕ್ಕೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.