
UDUPI : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
Friday, July 1, 2022
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಶಂಕರನಾರಾಯಣದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಾನಸ ಕುಲಾಲ್ ನೇಣಿಗೆ ಶರಣಾದ ಯುವತಿ. ಶಂಕರನಾರಾಯಣದ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದ ಮಾನಸ, ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಮಾನಸ ಕುಲಾಲ್ ಕುಟುಂಬದಲ್ಲಿ ಸಹೋದರರ ಕೆಲ ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ಪಿದ್ದ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.