
UDUPI : ಮೋಹನದಾಸ್ ಪೈ ವಿಧಿವಶ
Sunday, July 31, 2022
ಮಣಿಪಾಲದ ಪೈ ಕುಟುಂಬದ ಹಿರಿಯರಾದ, ಮೋಹನದಾಸ್ ಪೈ (89) ಅಸೌಖ್ಯದಿಂದ ಭಾನುವಾರ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮಣಿಪಾಲದ ಶಿಲ್ಪಿ ಡಾಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾ ಟಿಎಂಎ ಪೈ ಪ್ರತಿಷ್ಠಾನ, ಡಾ. ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟ್, ಸಿಂಡಿಕೇಟ್ ಬ್ಯಾಂಕ್ ನ ಪೂರ್ವ ರೂಪ ಐಸಿಡಿಎಸ್ ಲಿ. ಮಣಿಪಾಲ್ ಮೀಡಿಯ ನೆಟ್‌ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಕಾರ್ಯ ನಿರ್ವಾಹಿಸುತ್ತಿದ್ದರು.