UDUPI : ಬಸ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಕಾರು ; ಮೂವರಿಗೆ ಗಂಭೀರ ಗಾಯ
Tuesday, July 5, 2022
ಕಾರೊಂದು ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಬೈಂದೂರು ತಾಲೂಕಿನ ನಾವುಂದದಲ್ಲಿ ಚಲಿಸುತ್ತಿದ್ದ ಬಸ್‌ಗೆ ಕುಂದಾಪುರದಿಂದ ಭಟ್ಕಳ ಕಡೆಗೆ ಹೋಗುವ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಇದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.