ಉಡುಪಿ ನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಘಟನೆ ಹೆಜಮಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬಸ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಪಡುಬಿದ್ರೆ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.