
UDUPI : ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ
ಉಡುಪಿ ಜಿಲ್ಲೆಯ ಕುಂದಾಪುರದ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲ್ಯಾಡಿ ಮೂಲದ ಆನಂದ ನೇಣಿಗೆ ಶರಣಾದ ಉಪನ್ಯಾಸಕ.
ಕುಂದಾಪುರ ಅಂಕದಕಟ್ಟೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಇವರು, ನೇಣಿಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಎರಡು ತಿಂಗಳ ಹಿಂದೆ ಆನಂದ್ ಮದುವೆಯಾಗಿದ್ದರು. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.