
UDUPI : ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿ ಬಾವಿಗೆ ಹಾರಿ ಆತ್ಮಹತ್ಯೆ
ಉಡುಪಿ ಜಿಲ್ಲೆಯ ಕಾರ್ಕಳದ ತಾಲೂಕು ಕಚೇರಿ ಸಿಬ್ಬಂದಿಯಾಗಿ ಕೆಲ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಶ್ಮಿತ (25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಕಾರ್ಕಳದ ಹುಡ್ಕೋ ಕಾಲನಿ ನಿವಾಸಿಯಾಗಿರುವ ಸುಶ್ಮಿತಾ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆ–ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.