UDUPI : ಡಿವೈಡರ್ ಗೆ ಢಿಕ್ಕಿ ಹೊಡೆದು, ಬೈಕಿನ ಮೇಲೆ ಬಿದ್ದ ಕಾರು ; ಬೈಕ್ ಸವಾರ ಸಾವು
Monday, July 11, 2022
ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು, ಬೈಕಿನ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಮೃತ ಪಟ್ಟ ಘಟನೆ ಉಡುಪಿಯ ಕರಾವಳಿ ಬೈಪಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ವಿಜಯಪುರದ ನಿವಾಸಿ ಸುನಿಲ್ (24) ಸ್ಥಳದಲ್ಲೇ ಸಾವನ್ಪಿದ ಬೈಕ್ ಸವಾರ.
ಬ್ರಹ್ಮಾವರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ಮೊದಲು ರಸ್ತೆಯ ಡಿವೈಡರ್ ಗೆ ಢಿಕ್ಕಿ ಹೊಡೆದು ಸರ್ವೀಸ್ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಬಿದ್ದಿದೆ. ಪರಿಣಾಮ ಬೈಕ್ ಸವಾರ ವಿಜಯಪುರದ ನಿವಾಸಿ ಸುನಿಲ್ ಸ್ಥಳದಲ್ಲೇ ಮೃತಪಟ್ಟರು.ಸಹಸವಾರ ಬಾಗಲಕೋಟೆ ನಿವಾಸಿ ಮಂಜುನಾಥ್ ಗಾಯಗೊಂಡಿದ್ದಾರೆ. ಉಡುಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.