UDUPI ; ಉಡುಪಿಯಲ್ಲಿ ಭಾರಿ ಮಳೆ ಹಿನ್ನೆಲೆ : ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Tuesday, July 5, 2022
ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ,ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ. ಉಡುಪಿ ನಗರ ಸೇರಿದಂತೆ ಕಾರ್ಕಳ, ಹೆಬ್ರಿ, ಕಾಪು ಕುಂದಾಪುರ ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿ ಸಮುದ್ರ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..