UDUPI ; ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ ; ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವು
Tuesday, July 5, 2022
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವನ್ಪಿದ ಘಟನೆ ಉಡುಪಿಯ ಪಡುಬಿದ್ರಿ ಜಂಕ್ಷನ್‌ನಲ್ಲಿ ನಡೆದಿದೆ.
ಕಂಚಿನಡ್ಕ ನಿವಾಸಿ ಸಂಶುದ್ದೀನ್ ಸ್ಥಳದಲ್ಲೇ ಸಾವನ್ಪಿದ ಬೈಕ್ ಸವಾರ. ಉಡುಪಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಬಂಧಿಸಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.