UDUPI ; ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ನಾಳೆ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ
Sunday, July 10, 2022
ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಳೆಯೂ ರೆಡ್ ಅಲರ್ಟ್ ಮುಂದುವರಿಯಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಯಂತೆ ನಾಳೆ ಭಾರಿ ಮಳೆಯಾಗಲಿದ್ದು, ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.
ನದಿ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ನೆರೆ ಹೆಚ್ಚಾದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಿಳಿಸಲಾಗಿದೆ. ಸಮುದ್ರ ಪ್ರಕ್ಷುಬ್ಧಗೊಂಡು ಕಡಲ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ..