
UDUPI : ಮಾನಸಿಕ ಖಿನ್ನತೆ : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದ ಈಶ್ವರ ನಗರದಲ್ಲಿ ನಡೆದಿದೆ. ಸುಮತಿ (72) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಸುಮತಿ ಅವರು ಅನೇಕ ವರ್ಷಗಳಿಂದ ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು, ಪತಿಯ ಮರಣದ ಬಳಿಕ ಬಳಿಕ ಸುಮತಿಯವರ ಮಾನಸಿಕ ಖಿನ್ನತೆ ಸಮಸ್ಯೆ ಉಲ್ಬಣಗೊಂಡಿತ್ತು. ಇದೇ ಕಾರಣದಿಂದ, ಜೀವನದಲ್ಲಿ ಜಿಗುಪ್ಪೆಗೊಂಡು ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.