UDUPI : ಗಾಂಜಾ, ಎಂಡಿಎಂಎ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರ ಬಂಧನ
Wednesday, July 6, 2022
ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ರೆಹಮಾನ್ ( 31 ), ಅಬ್ದುಲ್ ಸಮದ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಭಟ್ಕಳ ಮತ್ತು ಉಡುಪಿ ಮೂಲದವರು ಎಂದು ತಿಳಿದು ಬಂದಿದೆ. ಆರೋಪಗಳು ಉಡುಪಿಯಿಂದ ಉತ್ತರಕನ್ನಡ ಜಿಲ್ಲೆಯ ಕಡೆಗೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ, ಡಿ.ವೈ.ಎಸ್.ಪಿ ಶ್ರೀಕಾಂತ್, ಸಿಪಿಐ ಸಂತೋಷ್ ಕಾಯ್ಕಿಣಿ ನೇತೃತ್ವದ ತಂಡ, ಬೈಂದೂರು ಬಂಧಿಸಿ, ಆರೋಪಿಗಳಿಂದ 30ಗ್ರಾಂ ತೂಕದ ಗಾಂಜಾ,11,420 ಗ್ರಾಂ ತೂಕದ ಎಂ.ಡಿ.ಎಂ.ಎ ಹರಳು ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರಕರಣ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.