
UDUPI : ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಮಗ ಆತ್ಮಹತ್ಯೆ
ಮಳೆಯಲ್ಲಿ ಆಟವಾಡಬೇಡ ಅಂತ ಮನೆಯವರು ಬುದ್ಧಿ ಹೇಳಿದ್ದಕ್ಕೆ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿವೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯ ಸಾಲಿಗ್ರಾಮ ಸಮೀಪದ ಕಾರ್ಕಡದಲ್ಲಿ ನಡೆದಿದೆ. ಕಾರ್ಕಡದ ಲಕ್ಷ್ಮೀ ಪೂಜಾರಿ ಅವರ ಪುತ್ರ ನಾಗೇಂದ್ರ (14) ಆತ್ಮಹತ್ಯೆಗೆ ಶರಣಾದ ಬಾಲಕ.
ಕೋಟದ ಖಾಸಗಿ ಹೈಸ್ಕೂಲ್‌ವೊಂದರ ವಿದ್ಯಾರ್ಥಿಯಾಗಿದ್ದ ಈತ, ಶಾಲೆಗೆ ರಜೆ ಇದ್ದ ಕಾರಣ ಬೆಳಗ್ಗೆ ಕಾರ್ಕಡ ಶಾಲಾ ಮೈದಾನಲ್ಲಿ ಆಟವಾಡಲು ತೆರಳಿದ್ದ. ನಂತರ ಮನೆಗೆ ಬಂದಾಗ, ಮಳೆಯಲ್ಲಿ ಆಟವಾಡದಂತೆ ತಾಯಿ ಬುದ್ಧಿ ಹೇಳಿದ್ದರು. ಇಷ್ಟಕ್ಕೇ ಹಠ ಸ್ವಭಾವದ ನಾಗೇಂದ್ರ ಸಿಟ್ಟುಗೊಂಡು ಮನೆ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.