
UDUPI : ಕಡಲ ಕೊರೆತ ಸಮಸ್ಯೆ ಎದುರಿಸುತ್ತಿರುವ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ
ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಕಡಲ ಕೊರತೆ ಸಮಸ್ಯೆ ಎದುರಿಸುತ್ತಿರುವ ಮೂಳೂರಿನ ತೊಟ್ಟಂ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ, ಶೋಭಾ ಕರಂದ್ಲಾಜೆ, ಕಡಲ್ಕೊರೆತ ತಡೆಗೆ ಶಾಶ್ವತ ತಡೆಗೋಡೆಯ ಅಗತ್ಯವಿದೆ. ಆದರೆ ಸಿಆರ್ ಝಡ್ ಮತ್ತು ಇನ್ನಿತರ ಕಾರಣಗಳಿಂದಾಗಿ ಇದು ವಿಳಂಬ ಆಗುತ್ತಿದೆ ಎಂದರು.
ಆರಂಭದಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿತ್ತು. ಆದರೆ ಕಳೆದ 10 ದಿನಗಳಿಂದ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಇದರಿಂದಾಗಿ ದೊಡ್ಡ ಪ್ರಮಾಣದ ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ಏಳು ಮನೆಗಳು ಕುಸಿದಿದೆ, 30 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಪ್ರತಿ ವರ್ಷ ಸಮುದ್ರ ಜಮೀನನ್ನು ಕೊರೆಯುತ್ತಿದೆ. ಪ್ರತಿ ವರ್ಷದಂತೆ ಕಡಲ್ಕೊರೆತ ತಡೆಗಟ್ಟಲು ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ ತಡೆಗೂಡೆ ಇದ್ದಲ್ಲೂ ಕೆಲವು ಕಡೆಗಳಲ್ಲಿ ಈ ಬಾರಿ ನೀರು ನುಗ್ಗಿದೆ. ಇದಕ್ಕೆ ಶಾಶ್ವತವಾದ ತಡೆಗೋಡೆ ನಿರ್ಮಾಣ ಆಗಬೇಕು. ಸುಮಾರು 30 ಕೋಟಿ ರುಪಾಯಿ ಹಾನಿ ಉಂಟಾಗಿದೆ. ಇದಕ್ಕೆ ಬೇಕಾದ ಹಣ ನೀಡುವಲ್ಲಿ ಸಿಎಂ ಹಾಗೂ ಕಂದಾಯ ಸಚಿವರಲ್ಲಿ ಈಗಾಗಲೇ ಮಾತನಾಡಿದ್ದೇನೆ. ಹಂತ ಹಂತವಾಗಿ ಹಣ ನೀಡುವ ಭರವಸೆ ನೀಡಿದ್ದಾರೆ ಅಂತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ