UDUPI : ನಾಳೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ : ಶಾಲಾ ಕಾಲೇಜುಗಳಿಗೆ ರಜೆ
Wednesday, July 6, 2022
ನಾಳೆ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ನೀಡಿದ್ದಾರೆ.
ನದಿ ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ..