
UDUPI : ಬೈಂದೂರಿನ ನೆರೆ ಸಂತ್ರಸ್ತರಿಗೆ ಕಿಟ್ ವಿತರಣೆ
Sunday, July 10, 2022
ಮಳೆಯಿಂದ ನೆರೆ ಹಾವಳಿಗೆ ತುತ್ತಾಗಿದ್ದ ಉಡುಪಿಯ ಬೈಂದೂರು ತಾಲೂಕಿನ ನಾವುಂದದ ಸಾಲ್ಬುಡ ಪ್ರದೇಶದ ಸಂತ್ರಸ್ತ ಜನರಿಗೆ ಆಹಾರ ಸಾಮಾಗ್ರಿ ಕಿಟ್ ಹಂಚಲಾಯಿತು.
ಕಿಟ್ ವಿತರಿಸಿದ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಪ್ರತಿವರ್ಷ ಮಳೆಗಾಲದಲ್ಲಿ ಈ ಸಮಸ್ಯೆ ಕಂಡುಬರುತ್ತಿದ್ದು, ಜನರ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಾಗಿದೆ. ನೆರೆ ವೇಳೆ ಜಾನುವಾರುಗಳನ್ನು ಸುರಕ್ಷಿತ ಸ್ಥಳದಲ್ಲಿ ಕಟ್ಟಲು ಸೂಕ್ತ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.
ಹಾನಿಗೆ ಸಂಬಂಧಿಸಿದಂತೆಯೂ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಅಂತ ನೆರೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಹೇಳಿದರು. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿಯವರ ವೈಯಕ್ತಿಕ ಖರ್ಚಿನಲ್ಲಿ ನೂರಕ್ಕೂ ಅಧಿಕ ಕಿಟ್ ವಿತರಣೆ ಮಾಡಲಾಯಿತು..