
UDUPI : ಉಡುಪಿಯಲ್ಲಿ ರೆಡ್ ಎಲರ್ಟ್ ಮುಂದುವರಿಕೆ : ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ
Thursday, July 7, 2022
ಉಡುಪಿ ಜಿಲ್ಲೆಯಾದ್ಯಂತ ಉತ್ತಮ ಮಳೆ ಮುಂದುವರಿದ್ದು,
ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆಯಾಗಿದೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ನೀಡಿದ್ದಾರೆ.
ನದಿ ಸಮುದ್ರ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..