UDUPI : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಸುನೀಲ್ ಕುಮಾರ್ ಭೇಟಿ
Friday, July 8, 2022
ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಹಾನಿಗೊಳಗಾದ ಕಾರ್ಕಳ ವ್ಯಾಪ್ತಿಯ ಸ್ಥಳಗಳಿಗೆ ಇಂಧನ ಸಚಿವ ಶ್ರೀ ವಿ ಸುನಿಲ್ ಕುಮಾರ್ ರವರು ಭೇಟಿ ನೀಡಿ ಪರಿಶೀಲಿಸಿದರು. ಹೆಬ್ರಿ ತಾಲೂಕು ಅಂಡಾರು ಗ್ರಾಮದ ಪೈಥಾಳ ಎಂಬಲ್ಲಿನ ಸಂಪರ್ಕ ಸೇತುವೆ ಹಾನಿಯಾಗಿರುವ ಮತ್ತು ಕಾರ್ಕಳ ತಾಲೂಕು ಸಾಣೂರು ಗ್ರಾಮದ ಸರಕಾರಿ ಪದವಿಪೂರ್ವ ಕಾಲೇಜು ಬಳಿ ಭೂ ಕುಸಿತ ಆದ ಸ್ಥಳಗಳಿಗೆ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಭೇಟಿ ನೀಡಿದರು.
ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ತುರ್ತು ದುರಸ್ತಿ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಮಾನ್ಯ ಸಚಿವರು ಮಳೆ ಹಾನಿ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸರ್ವ ರೀತಿಯಲ್ಲೂ ಸನ್ನದ್ಧರಾಗಿರುವಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.