UDUPI : ಕೊರೊನಾ ತಡೆಗಟ್ಟಲು ಉಡುಪಿಯಲ್ಲಿ ಬೂಸ್ಟರ್ ಡೋಸ್
Monday, July 18, 2022
ಕೊರೊನಾ ತಡೆಗಟ್ಟಲು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ನೀಡುವ ಉದ್ದೇಶದಿಂದ ಸಾರ್ವಜನಿಕರಿಗೆ ಸೆ.30ರ ವರೆಗೆ ಉಚಿತ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಕ್ಕೆ ಉಡುಪಿಯ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಚಾಲನೆ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟ 10,04,712 ಫಲಾನುಭವಿಗಳು ಮೊದಲ ಡೋಸ್ ಪಡೆದು ಶೇ.100.57 ಹಾಗೂ 10,00,092 ಮಂದಿ ಎರಡನೇ ಡೋಸ್ ಪಡೆದಿದ್ದು, ಶೇ.100.11 ಸಾಧನೆ ಆಗಿದೆ. ಮುನ್ನೆಚ್ಚರಿಕೆ ಡೋಸ್ ಪಡೆಯಲು ಜಿಲ್ಲೆಯಲ್ಲಿ 18 ರಿಂದ 59 ವರ್ಷದ 8,00,000 ಫಲಾನುಭವಿಗಳಿದ್ದಾರೆ. 18 ವರ್ಷ ಮೇಲ್ಪಟ್ಟ, 2ನೇ ಡೋಸ್ ಲಸಿಕೆ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಇಂದಿನಿಂದ ಹತ್ತಿರದ ಸರಕಾರಿ ಆರೋಗ್ಯ ಕೇಂದ್ರಗಳ ಹೋಗಿ ಉಚಿತವಾಗಿ ಬೂಸ್ಟರ್ ಡೋಸ್ ಪಡೆಯಬಹುದು.