UDUPI : ಭಾರೀ ಮಳೆಯಾಗುವ ಹಿನ್ನೆಲೆ ; ನಾಳೆ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Tuesday, July 5, 2022
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ (ಜು.೬) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ನೀಡಿದ್ದಾರೆ. ಉಡುಪಿ ನಗರ ಸೇರಿದಂತೆ ಕಾರ್ಕಳ, ಹೆಬ್ರಿ, ಕುಂದಾಪುರ, ಬೈಂದೂರು, ಕಾಪು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವ ನದಿಗಳು ಉಕ್ಕಿ ಹರಿಯುತ್ತಿವೆ. ನಾಳೆಯು ಮತ್ತಷ್ಟು ಮಳೆಯಾಗುವ ಸಾಧ್ಯತೆವಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಘೋಷಿಸಿದ್ದಾರೆ.