
UDUPI : ಅಗ್ನಿ ಅವಘಡ ; ಹೊತ್ತಿ ಉರಿದ ರೆಸ್ಟೋರೆಂಟ್
ಉಡುಪಿಯ ಮಣಿಪಾಲ ಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ವಸತಿಗೃಹದಲ್ಲಿದ್ದ ರೆಸ್ಟೋರೆಂಟ್ ಹೊತ್ತಿ ಉರಿದಿದೆ. ಲಾಡ್ಜ್ ನ ರೆಸ್ಟೋರೆಂಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಮಿಲಿ ರೆಸ್ಟೋರೆಂಟ್ ನ್ನು ವ್ಯಾಪಿಸಿತು.
ತಕ್ಷಣ ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಡಯಿತು. ಸತತ ಕಾರ್ಯಚರಣೆಯಿಂದ ಬೆಂಕಿ ನಂದಿಸಲಾಗಿದೆ. ಆದರೆ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ. ರೆಸ್ಟೋರೆಂಟ್ ನ ಫರ್ನಿಚರ್ ಗಳು ,ಪೀಠೋಪಕರಣಗಳ ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳು ಬೆಂಕಿಗೆ ಆಹುತಿಯಾಗಿವೆ.