
UDUPI : ದರೆಗುರುಳಿದ ಬೃಹತ್ ಗಾತ್ರದ ಮರ ; ಸ್ವಲ್ಪದರಲ್ಲೇ ಪಾರಾದ ಬೈಕ್ ಸವಾರ
ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್ ನಿಂದ ಅಂಬಲಪಾಡಿಗೆ ತೆರಳುವ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದು, ಒಂದು ಕಾರು, ಒಂದು ಬುಲೆಟ್ ಬೈಕ್ ಜಖಂಗೊಂಡಿದ್ದು, ಬುಲೆಟ್ ಬೈಕ್‌ನ ಸವಾರ ಗಾಯಗೊಂಡಿದ್ದಾರೆ.
ಗಾಯಗೊಂಡ ಬೈಕ್ ಸವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ, ಮೆಸ್ಕಾಂ ಸಿಬ್ಬಂದಿ ಹಾಗು ಸ್ಥಳೀಯರು ಕೂಡಿಕೊಂಡು ಮರ ತೆರವು ಕಾರ್ಯಚರಣೆ ನಡೆಸಿದ್ದು, ಕೆಲ ಕಾಲ ರಸ್ತೆ ಸಂಚಾರಕ್ಕೆ ತೊಡಕು ಉಂಟಾಗಿ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸಿದರು..