
UDUPI : ವಕೀಲೆ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿದ್ದ ಆರೋಪಿ ಬಂಧನ
ಉಡುಪಿಯ ನಗರ ವಕೀಲೆಯೊಬ್ಬರ ಮನೆಗೆ ಮನೆಗೆ ನುಗ್ಗಿ ನಗ ನಗದು ದೋಚಿದ್ದ ಆರೋಪಿ ಪೊಲೀಸರು ಬಂಧಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯ ಮುತ್ತಣ್ಣ ಬಸಣ್ಣ ಮಾವರಾಣಿ (27) ಬಂಧಿತ ಆರೋಪಿ.
ಹಾಡು ಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ನಗದು, ಚಿನ್ನಾಭರಣ, ಬೆಲೆಬಾಳುವ ಸೀರೆ ಸೇರಿದಂತೆ ಒಟ್ಟು ಇಪ್ಪತೈದು ಲಕ್ಷದ ಮೌಲ್ಯದ ವಸ್ತುಗಳನ್ನು ಕಳವುಗೈದಿದ್ದ. ಆರೋಪಿಯಿಂದ ಸುಮಾರು ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 38,500 ರೂ. ನಗದು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಉಡುಪಿ ನ್ಯಾಯಲಯಕ್ಕೆ ಹಾಜರುಪಡಿಸಿ, ಆರೋಪಿಗೆ ನ್ಯಾಯಲವು ಹದಿನೈದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.