-->
 ನಾಳೆ (ಸೆ.2 ) ಮಂಗಳೂರಿನಲ್ಲಿ ಶಾಲಾ ಕಾಲೇಜಿಗೆ ರಜೆ

ನಾಳೆ (ಸೆ.2 ) ಮಂಗಳೂರಿನಲ್ಲಿ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬರುವ ದಿನವಾದ ಸೆ.2 ರಂದು (ನಾಳೆ) ಗಣೇಶೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಸೆ.2 ರಂದು ನಗರದ ವಿವಿಧೆಡೆ ಗಣೇಶೋತ್ಸವ ಕಾರ್ಯಕ್ರಮ ಇದ್ದು, ಈ ಹಿನ್ನೆಲೆ ಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಕಟನೆ ಇಂತಿದೆ👇


ದಿನಾಂಕ : 02-09-2022 ರಂದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಾಗೂ ಶಾಲಾ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಕುರಿತು .

 02/09/2022 ರಂದು ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ , ಈ ಸಮಯದಲ್ಲಿ ಹೆಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರುತ್ತದೆ ಎಂದು ಪೊಲೀಸ್ ಇಲಾಖೆಯ ಮಾಹಿತಿಯಂತೆ ತಿಳಿದುಬರುತ್ತದೆ . ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ , ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ , ಪ್ರಾಥಮಿಕ ಮತ್ತು ಪ್ರೌಢ ಶಾಲೆ , ಪದವಿ ಪೂರ್ವ ಸ್ನಾತಕೊತ್ತರ ಪದವಿ , ಡಿಪ್ಲೋಮ , ಐ.ಟಿ.ಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ : 02-09-2022 ರಂದು ರಜೆಯನ್ನು ಘೋಷಿಸಿ ಆದೇಶಿಸಿದೆ . ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸುವುದು



Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99