UDUPI : ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ವಂಚನೆ..!
Monday, August 8, 2022
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬ 10 ಲಕ್ಷ ರೂಪಾಯಿ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಎಂಬಲ್ಲಿ ನಡೆದಿದೆ. ತ್ರಾಸಿ ಗ್ರಾಮ ನಿವಾಸಿ ರೆಹಾನ್ ಅಹ್ಮದ್ ಅವರಿಗೆ ಲತೇಶ್ ಸಂಜೀವ್ ಕುಂಬ್ಳೆ ಎಂಬ ವ್ಯಕ್ತಿ ವಂಚಿಸಿದ್ದಾನೆ ಎನ್ನಲಾಗಿದೆ.
ಲತೇಶ್ ತನಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯವಿರುವುದಾಗಿ ರೆಹಾನ್ ಅವರನ್ನು ನಂಬಿಸಿದ್ದಾನೆ. ಬಳಿಕ ರೆಹಾನ್ ಅವರ ಅಕ್ಕ ಸಬೀನಾ ಅರ್ ಅವರಿಗೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ 10 ಲಕ್ಷ ರೂ. ಹಣ ಪಡೆದಿದ್ದನು. ಈ ಬಗ್ಗೆ ಕುಂದಾಪುರ ನ್ಯಾಯಾಲಯದಲ್ಲಿ ದಾಖಲಾದ ಖಾಸಗಿ ದೂರಿನಂತೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.