UDUPI : ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಸಾವು
Monday, August 8, 2022
ಗದ್ದೆಯಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ.
ವಿದ್ಯುತ್ ತಂತಿಗಳು ತೀರಾ ಹಳೆಯದಾಗಿದ್ದು, ಹೀಗಾಗಿ ಕಡಿದು ಬಿದಿದೆ. ಇದರಿಂದ ಹಸುಗಳು ಸಾವನ್ನಪ್ಪಿದೆ ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.