UDUPI : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆಕಾರಿ ಪೋಸ್ಟ್ : ಪ್ರಕರಣ ದಾಖಲು
Thursday, August 4, 2022
ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಉಡುಪಿ ಜಿಲ್ಲೆಯ ಬೈಂದೂರಿನ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ.
ಲಕ್ಷ್ಮೀಕಾಂತ ಬೈಂದೂರು ಎಂಬ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯಾಗಿದ್ದು, ಈತ ಪೇಸ್ ಬುಕ್ ಖಾತೆಯಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹೀರೋ ಅಂತ ಬಿಂಬಿಸಿ ಪ್ರಚೋದನ ಶೀರ್ಷಿಕೆ ನೀಡಿ ಪೋಸ್ಟ್ ಮಾಡಿದ್ದ. ಪ್ರಚೋದನಕಾರಿ ಪೋಸ್ಟ್ ಮಾಡಿದ ಹಿನ್ನಲೆ ಉಡುಪಿ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಲಕ್ಷ್ಮೀಕಾಂತ್ ವಿರುದ್ದ ಪ್ರಕರಣ ದಾಖಲಾಗಿದೆ.