UDUPI : ಉಡುಪಿ ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ
Wednesday, August 17, 2022
ಉಡುಪಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಉಡುಪಿ ಜಿಲ್ಲಾ ಕಾಂಗ್ರೆಸ್ ಆಫೀಸ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಉಡುಪಿಯ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಅಳವಡಿಸಿದ ಸಾವರ್ಕರ್ ಬ್ಯಾನರ್‌ಗೆ ಪುಷ್ಪಾರ್ಚನೆ ಸಲ್ಲಿಸಿದ, ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದ್ದರು. ಬಳಿಕ ಬ್ರಹ್ಮಗಿರಿ ಸರ್ಕಲ್‌ನಿಂದ ಸಮೀಪದಲ್ಲೇ ಇರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ ಕಚೇರಿಯ ಅಂಗಳದಲ್ಲೇ ತಡೆದ ಪೊಲೀಸರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಕಾಂಗ್ರೆಸ್ ಕಚೇರಿಯ ಒಳ ನುಗ್ಗದಂತೆ ತಡೆದರು. ಕೊನೆಗೆ ಪೊಲೀಸರು, ಯುವ ಮೋರ್ಚಾ ಕಾರ್ಯಕರ್ತರಿಗೆ, ಮುತ್ತಿಗೆ ಹಾಕದಂತೆ ಎಚ್ಚರಿಕೆ ನೀಡಿ ಕಳುಹಿಸಿದರು.