
UDUPI : ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಕೊಡಿ ; ಯಶ್‌ಪಾಲ್ ಸುವರ್ಣ ಮನವಿ
ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಬ್ಯಾನರ್ ಅವಳಡಿಸಿದ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿ, ಸದ್ಯ ಪೊಲೀಸ್ ಬ್ರಹ್ಮಗಿರಿ ವೃತ್ತದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈ ನಡುವೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ನಿನ್ನೆ ಭಾರೀ ಸಂಖ್ಯೆಯಲ್ಲಿ ಸೇರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತ್ತು. ಇದೀಗ ಬಿಜೆಪಿ ಪ್ರಭಾವೀ ಮುಖಂಡ ಯಶ್ ಪಾಲ್ ಸುವರ್ಣ, ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರಸಭೆಗೆ ಮನವಿ ಸಲ್ಲಿಸಿದ್ದಾರೆ..