Header Ad

UDUPI : ಚಾಲಕನ‌ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್‌ಗೆ ನುಗ್ಗಿ, ಇಬ್ಬರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ ೬೬ ರ  ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
ಉಡುಪಿ ಕಡೆಯಿಂದ ಬಂಟಕಲ್ಲುಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್ ಯು ವಿ ಕಾರು ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಾರಿಗೆ ಢಿಕ್ಕಿ ಹೊಡೆದು, ರಸ್ತೆಯ ಬದಿಯಲ್ಲಿದ್ದ ಹೋಟಿಗೆ ನುಗ್ಗಿದೆ. ಪರಿಣಾಮ ಹೋಟೆಲಿನ ಓರ್ವ ಸಿಬ್ಬಂದಿ ಹಾಗೂ ಗ್ರಾಹಕನಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯ ರಭಸಕ್ಕೆ ಎರಡು ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ರಾಯಲ್ ಹಟ್ ಹೋಟೆಲಿಗೆ ಅಪಾರ ನಷ್ಟ ಉಂಟಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳು