ಸುದ್ದಿಗಳು
ಲೋಡ್ ಆಗುತ್ತಿದೆ...

UDUPI : ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಮೀನುಗಾರರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ. 
ಹೊಸಹಿತ್ತು ನಿವಾಸಿ ನಾರಾಯಣ(60) ಮೃತ ಮೀನುಗಾರ. ನಾರಾಯಣ ಅವರು, ದೋಣಿಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಹೋಗಿದ್ದು, ಈ ವೇಳೆ ಕುಸಿದು ಸಮುದ್ರಕ್ಕೆ ಬಿದ್ದಿದ್ದಾರೆ. 

ಇತರೆ ಮೀನುಗಾರರು ಮೇಲಕ್ಕೆ ಎತ್ತಿ ತಕ್ಷಣ 
ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಹಂಚಿಕೊಳ್ಳಿ:
ಇತ್ತೀಚಿನ ಸುದ್ದಿಗಳು
×

WhatsApp Channel

ಬ್ರೇಕಿಂಗ್ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

JOIN NOW