UDUPI : ಕಾರಿಗೆ ಲಾರಿ ಢಿಕ್ಕಿ : ವಿದ್ಯಾರ್ಥಿನಿಗೆ ಗಾಯ
Thursday, August 4, 2022
ಉಡುಪಿಯ ಸಂತೆಕಟ್ಟೆ ಜಂಕ್ಷನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಣಿಪಾಲದ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ವೇಳೆ ರಾತ್ರಿ ವೇಳೆ ಅಪಘಾತ ಸಂಭವಿಸಿದ್ದು, ಮಣಿಪಾಲದ ವಿದ್ಯಾರ್ಥಿನಿ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ವಿದ್ಯಾರ್ಥಿನಿ ತಲೆಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ಕೂಡಲೇ ಮಲ್ಪೆಯ ಆಪದ್ಬಾಂಧವ ಈಶ್ವರ್ ಮಲ್ಪೆ ಮತ್ತು ಸ್ನೇಹಿತರು ವಿದ್ಯಾರ್ಥಿನಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.