ಉಡುಪಿ ಜಿಲ್ಲೆಯ ಹೆಬ್ರಿಯ ಶಿವಪುರದ ಗ್ರಾಮದ ಬ್ಯಾಣದಲ್ಲಿರುವ ಗದ್ದಿಗೆ ಅಮ್ಮನವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವಿಯ ಚಿನ್ನಾಭರಣ ಕಳವುಗೈದಿದ್ದಾರೆ.
ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು, ದೇವಿಯ ಮೂರ್ತಿಗೆ ಹಾಕಿರುವ ಚಿನ್ನದ ಕರಿಮಣಿ, 3 ಚಿನ್ನದ ಸಣ್ಣ ಸರ ಹಾಗೂ ಚಿನ್ನದ ತಾಳಿ ಇರುವ ಬೆಳ್ಳಿಯ ಸರ ಹಾಗೂ ಎರಡು ಕಾಣಿಗೆ ಡಬ್ಬಿಗಳನ್ನು ಕಳವು ಮಾಡಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ 60,000ರೂ. ಅಂತ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.