UDUPI : ಬೈಕ್ ಢಿಕ್ಕಿ ಪಾದಚಾರಿ ಸಾವು ; ಬೈಕ್ ಸವಾರ ಎಸ್ಕೇಪ್
Wednesday, August 31, 2022
ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ಪಿದ ಘಟನೆ
ಉಡುಪಿಯ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಸುರೇಶ್ ಶೇರಿಗಾರ್(50) ಮೃತಪಟ್ಟವರು.
ಸುರೇಶ್ ಶೇರಿಗಾರ್ ಮಂಗಳೂರು-ಉಡುಪಿ ರಸ್ತೆಯನ್ನು ದಾಟುತ್ತಿದ್ದಾಗ ಕಾಪು ಕಡೆಯಿಂದ ಪಾಂಗಾಳ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಬೈಕ್ ಸವಾರ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸುರೇಶ್ ಶೇರಿಗಾರ್, ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.