UDUPI : ಸಾವರ್ಕರ್ ಪ್ರತಿಮೆ ಸಮಂಜಸ ಅಲ್ಲ : ರಘುಪತಿ ಭಟ್ ಅಚ್ಚರಿ ಹೇಳಿಕೆ
Tuesday, August 23, 2022
ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಸಾವರ್ಕರ್ ಪುತ್ತಳಿ ನಿರ್ಮಾಣ ವಿಚಾರ ಭಾರಿ ಚರ್ಚೆ ಆಗುತ್ತಿದ್ದು, ಪ್ರತಿಮೆ ನಿರ್ಮಾಣಕ್ಕಾಗಿ ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣ ನಗರಸಭೆಗೆ ಮನವಿ ಕೂಡ ಮಾಡಿದ್ದಾರೆ. ಈ ನಡುವೆ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸ ಅಲ್ಲ ಅಂತ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ, ಶಾಸಕ ರಘುಪತಿ ಭಟ್, ಮುಂದಿನ ಕೌನ್ಸಿಲ್ ಮೀಟಿಂಗ್ ನಲ್ಲಿ ಪುತ್ತಳಿ ನಿರ್ಮಾಣದ ಬಗ್ಗೆ ಚರ್ಚಿಸಿ ನಿರ್ಧಾರಕ್ಕೆ ಬರುವ ಸಾಧ್ಯತೆ. ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸ ಅಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನ ವಾದರೆ ಕಷ್ಟ. ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸಲು ನಗರ ಸಭೆಗೆ ಪತ್ರ ಬರೆದಿದ್ದೇನೆ. ಜನನಿಬಿಡ ಪ್ರದೇಶವಾದ ಹಳೆ ತಾಲೂಕ ಆಫೀಸ್ ಬಳಿಯ ಸರ್ಕಲ್ ಗೆ ಸಾವರ್ಕರ್ ಹೆಸರು. ಈ ಬಗ್ಗೆ ನಗರ ಸಭೆಯ ಅಧಿವೇಶನದಲ್ಲಿ ಠರಾವು ಇಡುತ್ತೇನೆ.
ಈ ಬಗ್ಗೆ ಈಗಾಗಲೇ ನಗರಸಭೆಗೆ ಪತ್ರ ಬರೆದಿದ್ದೇನೆ. ಮೂರ್ತಿ ನಿರ್ಮಿಸುವ ಬಗ್ಗೆ ಚರ್ಚೆ ಮಾಡಬೇಕು. ಉಡುಪಿಯಲ್ಲಿ ವೀರ ಸಾವರ್ಕರ್ ಸರ್ಕಲ್ ನಿರ್ಮಾಣವಾಗುತ್ತೆ. ವೀರ ಸಾವರ್ಕರ್ ಜೊತೆಗೆ ಅಂಬೇಡ್ಕರ್ ಸರ್ಕಲ್ ಕೂಡ ಮಾಡುತ್ತೇವೆ ಅಂತ ಹೇಳಿದ್ದಾರೆ. ಆದ್ರೆ ಬಿಜೆಪಿ ನಾಯಕರ ಈ ರೀತಿಯ ವೈರುದ್ಯ ಹೇಳಿಕೆಗಳು ಜನರಲ್ಲಿ ಅಂತೆ ಕಂತೆ ಚರ್ಚೆ ಹುಟ್ಟು ಹಾಕಿದೆ.