-->

UDUPI : ಸಾವಿನಲ್ಲೂ ಒಂದಾದ ಸತಿ ಪತಿ

UDUPI : ಸಾವಿನಲ್ಲೂ ಒಂದಾದ ಸತಿ ಪತಿ

ವಿವಾಹವಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಸುಖದ ಸಂಸಾರ ಸಾಗಿಸಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಉಡುಪಿಯ ಕಾಪು ತಾಲೂಕಿನ ಬೆಳಪುವಿನಲ್ಲಿ ನಡೆದಿದೆ. ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (೮೦) ಮತ್ತು ಅವರ ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (೭೫) ಸಾವಿನಲ್ಲೂ ಒಂದಾದ ದಂಪತಿ.
ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರು ಮಂಗಳವಾರ ಬೆಳಗ್ಗೆ ನಿಧನ ಹೊಂದಿದ್ದರೆ, ಅವರ ಪತ್ನಿ ರೇವತಿ ಕೆ. ಶೆಟ್ಟಿ ಬುಧವಾರ ಮುಂಜಾನೆ ದೈವಾನರಾಗಿದ್ದಾರೆ. ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರು ವಯೋ ಸಹಜ ಕಾರಣಗಳಿಂದಾಗಿ ಮಂಗಳವಾರ ಮುಂಜಾನೆ ಮೃತಪಟ್ಟಿದ್ದು ಮಕ್ಕಳು ಮುಂಬಯಿ ಸಹಿತ ಬೇರೆ ಕಡೆಗಳಲ್ಲಿ ಇರುವುದರಿಂದ ಅವರ ಶವವನ್ನು ಕುಟುಂಬದ ಮೂಲ ಮನೆಯಲ್ಲಿ ಶೈತ್ಯೀಕರಣದ ವ್ಯವಸ್ಥೆಯೊಂದಿಗೆ ಮನೆಯಲ್ಲೇ ಇರಿಸಲಾಗಿತ್ತು. ಬುಧವಾರ ಮುಂಜಾನೆ ಮಕ್ಕಳು ಮನೆಗೆ ಬರುತ್ತಲೇ ಅವರ ಮೃತದೇಹವನ್ನು ತಮ್ಮ ಸ್ವಂತ ಮನೆಗೆ ತರಲಾಗಿತ್ತು. ಮೃತದೇಹವನ್ನು ಮನೆಯೊಳಗೆ ತಂದು ನೆಲಕ್ಕೆ ಇಟ್ಟ ಕೆಲವೇ ಕ್ಷಣದಲ್ಲಿ ಪತ್ನಿ ರೇವತಿ ಶೆಟ್ಟಿ ಅವರು ಕುಸಿದು ಬಿದ್ದು ಮೃತ ಪಟ್ಟಿದ್ದಾರೆ. ಒಂದೇ ಚಿತೆಯಲ್ಲಿ ಇಬ್ಬರಿಗೂ ಅಗ್ನಿಸ್ಪರ್ಶ ಮಾಡಲಾಯಿತು..

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99