UDUPI : ಮಹಿಳೆಗೆ ಮಾರಣಾಂತಿಕ ಹಲ್ಲೆ ; ಚಿನ್ನಾಭರಣ ಕಳವು
Friday, August 5, 2022
ಶಾಲಾ ಬಸ್ಸಿನಲ್ಲಿ ಬರುವ ಮಗನಿಗಾಗಿ ಕಾಯುತ್ತಿದ್ದ ಮಹಿಳೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಎಗರಿಸಿದ ಘಟನೆ ಉಡುಪಿಯ ಕುಂದಾಪು ತಾಲೂಕಿನ ಕೊರ್ಗಿ ಗ್ರಾಮದ ಕಾಡಿನಬೆಟ್ಟು ದಬ್ಬೆಕಟ್ಟೆ ಎಂಬಲ್ಲಿ ನಡೆದಿದೆ. ದೇವಕಿ ಘಟನೆಯಲ್ಲಿ ಗಂಭೀರ ಗಾಯಗೊಂಡ ಮಹಿಳೆ.
ದೇವಕಿ ಅವರು, ಸಂಜೆ ವೇಳೆ ಶಾಲಾ ವಾಹನದಲ್ಲಿ ಬರುವ ಮಗನಿಗಾಗಿ ಕಾಯುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ವೇದಾವತಿ ಅವರ
ತಲೆಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ, ಭಿನ್ನಾಭರಣ ಎಗರಿಸಿ ಪರಾರಿಯಾಗಿದ್ದಾರೆ. ಹಲ್ಲೆಯ ಪರಿಣಾಮ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದೆ. ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.