
UDUPI : ಕಾಲು ಸಂಕ ದಾಟುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿ
Monday, August 8, 2022
ಶಾಲೆಯಿಂದ ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಬಾಲಕಿಯೊಬ್ಬಳು ನೀರುಪಾಲಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.
ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7) ನೀರುಪಾಲಾದ ಬಾಲಕಿ. ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ ಕಾಲು ಸಂಕ ದಾಟುವಾಗ ಮಗು ಆಯಾತಪ್ಪಿ ಹಳ್ಳಕ್ಕೆ ಬಿದ್ದಿದೆ. ಕೂಡಲೇ ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ.