
ಮಂಗಳೂರು: ಪಿಎಫ್ಐಗೆ ಮತ್ತೆ ಶಾಕ್: ರಾತ್ರೋರಾತ್ರಿ ಪೊಲೀಸ್ ದಾಳಿಯಲ್ಲಿ 8ಕ್ಕೂ ಅಧಿಕ ಮಂದಿ ಮುಖಂಡರು ವಶಕ್ಕೆ
Tuesday, September 27, 2022
ಮಂಗಳೂರು: ರಾಜ್ಯದಲ್ಲಿ ಪಿಎಫ್ಐ ಮುಖಂಡರ ಮೇಲಿನ ದಾಳಿ ಮತ್ತೆ ಮುಂದುವರೆದಿದ್ದು, ದ.ಕ.ಜಿಲ್ಲೆಯಲ್ಲಿ ರಾತ್ರೋರಾತ್ರಿ ನಡೆದ ದಾಳಿಯಲ್ಲಿ 8ಕ್ಕೂ ಅಧಿಕ ಮಂದಿ ಪಿಎಫ್ಐ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ ಪುತ್ತೂರು ಭಾಗಗಳಲ್ಲಿ ದಾಳಿ ನಡೆಸಿರುವ ಪೊಲೀಸರು ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್ ಸೇರಿ 8 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ
ಪ್ರತಿಭಟನೆ ಮತ್ತು ಗಲಭೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಆರ್ ಪಿಸಿ 107 ಮತ್ತು 151ರಡಿ ಇವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ವಶಪಡಿಸಿಕೊಂಡ ಪಿಎಫ್ ಐ ಮುಖಂಡರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ ಪೊಲೀಸರು ಬಳಿಕ ಆಯಾ ಠಾಣಾ ವ್ಯಾಪ್ತಿಯ ತಾಲೂಕು ದಂಡಾಧಿಕಾರಿಗಳ ಮುಂದೆ ಹಾಜರು ಪಡಿಸಿ ಮಂಗಳೂರು ಜೈಲಿಗೆ ಕರೆ ತಂದು ಬಿಟ್ಟಿದ್ದಾರೆ.