
ಮಂಗಳೂರು: ಲಂಚ ಸ್ವೀಕಾರದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ, ಸಹಾಯಕ ಲೋಕಾಯುಕ್ತ ಅರೆಸ್ಟ್...!
Saturday, October 1, 2022
ಮಂಗಳೂರು: ಮಂಗಳೂರು ಮಿನಿ ವಿಧಾನಸೌಧಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ತಹಶೀಲ್ದಾರ್ ಹಾಗೂ ಸಹಾಯಕನನ್ನು ಬಂಧಿಸಿದೆ.
ಜಾಗ ಮಾರಾಟಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಎನ್ಓಸಿ ನೀಡಲು ತಹಶೀಲ್ದಾರ್ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ನಿನ್ನೆ ಸಂಜೆ ವೇಳೆ ಅವರಿಂದ ಶಿವಾಂದ ನಾಟೇಕರ್ 4,700 ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ಮಂಗಳೂರು ತಾಲೂಕು ಕಚೇರಿಗೆ ದಾಳಿ ನಡೆಸಿ ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ತಹಶೀಲ್ದಾರ್ ಪುರಂದರ್ ಹೆಗ್ಡೆಗಾಗಿ ತಾನು ಲಂಚ ಸ್ವೀಕರಿಸಿರುವುದಾಗಿ ಶಿವಾನಂದ ನಾಟೇಕರ್ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪುರಂದರ್ ಹೆಗ್ಡೆಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್ ಹಾಗೂ ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.