-->

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿಯರು ಚೆನ್ನೈನಲ್ಲಿ ಪತ್ತೆ: ಓದುವ ವಿಚಾರದಲ್ಲಿ ಪೋಷಕರ ಒತ್ತಡದಿಂದ ಅಸಮಾಧಾನಗೊಂಡು ಮನೆ ತೊರೆದರು

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಬಾಲಕಿಯರು ಚೆನ್ನೈನಲ್ಲಿ ಪತ್ತೆ: ಓದುವ ವಿಚಾರದಲ್ಲಿ ಪೋಷಕರ ಒತ್ತಡದಿಂದ ಅಸಮಾಧಾನಗೊಂಡು ಮನೆ ತೊರೆದರು


ಬೆಂಗಳೂರು: ನಗರದಿಂದ ನಾಪತ್ತೆಯಾಗಿದ್ದ ಮೂವರು ಶಾಲಾ ಬಾಲಕಿಯರು ಚೆನ್ನೈ ನಲ್ಲಿ ಪತ್ತೆಯಾಗಿದ್ದಾರೆ.‌ ಈ ಬಾಲಕಿಯರನ್ನು ಪುಲಿಕೇಶಿನಗರ ಠಾಣಾ ಪೊಲೀಸರು ನಗರಕ್ಕೆ ಕರೆತಂದಿದ್ದಾರೆ. 

ಈ ಮೂವರು ವಿದ್ಯಾರ್ಥಿನಿಯರು ಬೆಂಗಳೂರು ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರು ವಿದ್ಯಾರ್ಥಿನಿಯರು ಶಾಲಾ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರೆ, ಮತ್ತೋರ್ವ ಬಾಲಕಿ ಮನೆಯಿಂದಲೇ ಶಾಲೆಗೆ ಹೋಗುತ್ತಿದ್ದಳು. ಓದುವ ವಿಚಾರವಾಗಿ ಈ ವಿದ್ಯಾರ್ಥಿನಿಯರ ಮನೆಗಳಲ್ಲಿ ಪೋಷಕರು ಒತ್ತಡ ಹೇರಿದ್ದರಿಂದ ಅಸಮಾಧಾನಗೊಂಡಿದ್ದ ಬಾಲಕಿಯರು ವ್ಯವಸ್ಥಿತ ಯೋಜನೆ ಹಾಕಿಕೊಂಡು ಯಾರಿಗೂ ಹೇಳದೆ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ. 

ಈ ವಿದ್ಯಾರ್ಥಿನಿಯರು 21 ಸಾವಿರ ರೂ. ಹಣ ಸಂಗ್ರಹಿಸಿ ಸೆ .6 ರಂದು ಪರಾರಿಯಾಗಿದ್ದರು. ಈ ನಡುವೆ ನಾಪತ್ತೆಯಾಗಿದ್ದ ಮೂವರಲ್ಲಿ ಓರ್ವಳು ತನ್ನ ಸ್ನೇಹಿತೆಗೆ ಕರೆ ಮಾಡಿ ಮಾತನಾಡಿದ್ದಳು. ಆ ಸ್ನೇಹಿತೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಳು. ಇದರಂತೆ ಕಾರ್ಯಾಚರಣೆ ಕೈಗೊಂಡು ಪೊಲೀಸರು ನಗರಕ್ಕೆ ಕರೆತಂದಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಮೂವರು ಅಪ್ರಾಪ್ತಯರನ್ನು ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99