
ಮಂಗಳೂರು: ಖಾಸಗಿ ಆಸ್ಪತ್ರೆಯ ಡೀನ್ ನಾಪತ್ತೆ
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಡೀನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಉರ್ಬನ್ ಡಿಸೋಜ ಎಂಬವರು ಸೆ.25ರಿಂದ ನಾಪತ್ತೆ ಆಗಿರುವ ಬಗ್ಗೆ ಅವರ ಪತ್ನಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮನೆಯಿಂದ ಹೊರಗೆ ಹೋಗಿ ಬರುತ್ತೇನೆಂದು ಪತ್ನಿಯಲ್ಲಿ ಹೇಳಿ ಹೊರಟವರು ಮತ್ತೆ ಮನೆಗೆ ಮರಳಿಲ್ಲ. ದ್ವಿಚಕ್ರ ವಾಹನದಲ್ಲಿ ಹೊರಟಿರುವ ಅವರು ರಾತ್ರಿಯಾದರೂ ವಾಪಸ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಅವರ ಫೋನ್ ಕೂಡಾ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.