
ದೇಶಾದ್ಯಂತ PFI ಮತ್ತು ಸಹವರ್ತಿ ಸಂಸ್ಥೆಗಳ ಮೇಲೆ ನಿಷೇಧ
ನವದೆಹಲಿ: ಕೇಂದ್ರ ಸರ್ಕಾರವು PFI ( popular front of india) ಮತ್ತು ಅದರ ಸಹವರ್ತಿ ಸಂಸ್ಥೆಗಳ ಮೇಲೆ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧ ಹೇರಿದೆ.
ಪಿಎಫ್ಐ ಮತ್ತು ಸಹವರ್ತಿ ಸಂಸ್ಥೆಗಳನ್ನು ಕಾನೂನುಬಾಹಿರ ಎಂದು ಘೋಷಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ 5 ವರ್ಷಗಳವರೆಗೆ ನಿಷೇಧಿಸಿ ಆದೇಶಿಸಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ( (PFI)
ರಿಹಬ್ ಇಂಡಿಯಾ ಫೌಂಡೇಶನ್ (RIF),
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI),
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO),
ನ್ಯಾಷನಲ್ ವುಮೆನ್ಸ್ ಫ್ರಂಟ್ (NWF),
ಜೂನಿಯರ್ ಫ್ರಂಟ್,
ಎಂಪವರ್ ಇಂಡಿಯಾ ಫೌಂಡೇಶನ್
ರಿಹ್ಯಾಬ್ ಫೌಂಡೇಶನ್ ಕೇರಳ
ಪಿಎಫ್ ಐ ಸಂಘಟನೆ ಮೇಲೆ ಇತ್ತೀಚೆಗೆ ಎನ್ ಐಎ ದೇಶಾದ್ಯಂತ ದಾಳಿ ಮಾಡಿ ನೂರಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿತ್ತು. ಕರ್ನಾಟಕ ಸೇರಿದಂತೆ ದೇಶದ 93 ಸ್ಥಳಗಳಲ್ಲಿ ಎನ್ ಐಎ ಕಾರ್ಯಾಚರಣೆ ಕೈಗೊಂಡಿತ್ತು.
ನಿನ್ನೆ ಕರ್ನಾಟಕ, ಅಸ್ಸೋಂ, ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದು ಕೊಂಡಿದ್ದರು. ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ 80ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.